ಮೈಸೂರಿನಲ್ಲಿ ಹೊಸ ಕಂಪನಿಗಳ ಸ್ಥಾಪನೆ : 5,000 ಉದ್ಯೋಗ ಸೃಷ್ಟಿ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ (ESDM) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮ ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ, ಈ ಎಲ್ಲಾ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Leave a Reply

Your email address will not be published. Required fields are marked *