ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟಬೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತ-ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಒಡಿಶಾದ ಶಾಲೆಯಲ್ಲಿ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 100 ವಿದ್ಯಾರ್ಥಿಗಳು ಅಸ್ವಸ್ಥ
ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಅಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವ ಕಮಾಂಡರ್ ಗಡಿ ಭದ್ರತಾ ಪಡೆ ಎಡಿಜಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ಅಮಿತ್ ಷಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅರಾಜಕತೆ ಮೂಡಿರುವ ಬಾಂಗ್ಲಾದೇಶದಲ್ಲಿ ಈಗ ಅಲ್ಪಸಂಖ್ಯಾತ ಹಿಂದೂಗಳ ಮನೆ, ಉದ್ಯಮ ಹಾಗೂ ದೇವಾಲಯಗಳನ್ನು ಗುರಿಯಾಗಿಸಿ, ದಾಂದಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಾಗುತ್ತಿವೆ.
ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೆಚ್ಚಿನ ನಿಗಾವಹಿಸಿದೆ. ಭಯೋತ್ಪಾದಕರು ಸೇರಿದಂತೆ 1,200 ಕ್ಕೂ ಹೆಚ್ಚು ಕೈದಿಗಳು ಬಾಂಗ್ಲಾದೇಶದ ಜೈಲುಗಳಿಂದ ತಪ್ಪಿಸಿಕೊಂಡು ಭಾರತಕ್ಕೆ ಭಾರತಕ್ಕೆ ನುಸುಳಲು ಪ್ರಯತ್ನಿಸಬಹುದು ಎಂದು ಭದ್ರತಾ ಏಜೆನ್ಸಿಗಳು ಬಿಎಸ್ಎಫ್ಗೆ ಎಚ್ಚರಿಕೆ ನೀಡಿವೆ.
4,096 ಕಿಮೀ ಉದ್ದದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ವಾಸಿಸುವ ಸ್ಥಳೀಯರಿಗೆ ಗಡಿ ಪ್ರದೇಶಗಳಲ್ಲಿ ವಿಶೇಷವಾಗಿ ರಾತ್ರಿಯಲ್ಲಿ ಅನಗತ್ಯ ಸಂಚಾರವನ್ನು ಕೈಗೊಳ್ಳದಂತೆ ಬಿಎಸ್ಎಫ್ ಮನವಿ ಮಾಡಿದೆ. ಗಡಿಯಲ್ಲಿರುವ ಅಂಗಡಿಗಳನ್ನು ರಾತ್ರಿ 9 ಗಂಟೆಯೊಳಗೆ ಮುಚ್ಚುವಂತೆ ತಿಳಿಸಲಾಗಿದೆ.
ಸಂಸತ್ತಿನಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಅಲ್ಪಸಂಖ್ಯಾತರ ರಕ್ಷಣೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಸರ್ಕಾರ ಗಮನಿಸುತ್ತಿದೆ ಎಂದು ಹೇಳಿದ್ದಾರೆ.
ಬಿಎಸ್ಎಫ್ ಎಡಿಜಿಯ ಹೊರತಾಗಿ, ಸಮಿತಿಯ ಇತರ ನಾಲ್ವರು ಸದಸ್ಯರು ದಕ್ಷಿಣ ಬಂಗಾಳದ ಗಡಿಭಾಗದ ಬಿಎಸ್ಎಫ್ನ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ತ್ರಿಪುರಾ ಗಡಿಭಾಗದ ಐಜಿಪಿ, ಲ್ಯಾಂಡ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಸದಸ್ಯ (ಯೋಜನೆ ಮತ್ತು ಅಭಿವೃದ್ಧಿ) LPAI), ಮತ್ತು LPAI ನ ಕಾರ್ಯದರ್ಶಿಯಾಗಿರುತ್ತಾರೆ.
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯ ವರದಿಗಳು ಹೊರಬರುತ್ತಿದ್ದಂತೆ ಈ ಬೆಳವಣಿಗೆಗಳು ಸಂಭವಿಸಿವೆ. ಬಾಂಗ್ಲಾದ ಇಸ್ಕಾನ್ ದೇವಾಲಯದ ಮೇಲೆ ದಾಳಿ ನಡೆಸಲಾಗಿದೆ ಮತ್ತು ಹಲವಾರು ಇತರ ಹಿಂದೂ ದೇವಾಲಯಗಳಿಗೆ ಹಾನಿ ಮಾಡಲಾಗಿದೆ. ಬಾಂಗ್ಲಾದೇಶದ ಕ್ರಿಕೆಟಿಗ ಲಿಟನ್ ದಾಸ್ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎನ್ನಲಾಗಿದೆ ಎಂದು ಮೂಲಗಳು ತಿಳಿಸಿವೆ.