ರೇಣುಕಾಸ್ವಾಮಿ ಕೊಲೆ ಕೇಸ್ : ಶೀಘ್ರದಲ್ಲಿ ನ್ಯಾಯಾಲಯಕ್ಕೆ ‘ಚಾರ್ಜ್ ಶೀಟ್’ ಸಲ್ಲಿಕೆ – ಬಿ.ದಯಾನಂದ್

Bangalore Police Commissioner

Bangalore Police Commissioner

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗು ಪೊಲೀಸರು ಎಫ್ಎಸ್ಎಲ್ ವರದಿ ಸೇರಿದಂತೆ ಹಲವು ಸಾಕ್ಷಿಗಳನ್ನು ಸಂಗ್ರಹಿಸಿ ತನಿಖೆ ನಡೆಸಿದ್ದಾರೆ.

ಇದೀಗ ಎಲ್ಲಾ ವರದಿಗಳು ಸಿಕ್ಕ ಬಳಿಕ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿಮ ಘಟ್ಟ ತಲುಪಿದೆ. ಪ್ರಕರಣಕ್ಕೆ ಸಂಬಂಧಿಸಿದ ಮೌಖಿಕ, ಸಾಂಧರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಮತ್ತು ಅಲ್ಲಿಂದ ಸುಮಾರು ಶೇಕಡ 70 ರಷ್ಟು ವರದಿಗಳು ತಮ್ಮ ಕೈ ಸೇರಿವೆ ಎಂದು ಹೇಳಿದರು.

ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್ಎಸ್ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು ಕೆಲ ದಿನಗಳಲ್ಲಿ ತಮ್ಮನ್ನು ತಲುಪಲಿವೆ. ಎಲ್ಲ ವರದಿಗಳು ಪ್ರಾಪ್ತವಾದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆಯಲಾಗುವುದು, ಅದಾದ ನಂತರ ಪ್ರಕರಣದ ಅಂತಿಮ ವರದಿ ಅಥವಾ ಚಾರ್ಜ್ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *