ಬೆಂಗಳೂರು : ಭಾರತೀಯ ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಉತ್ತೇಜಿಸಲು ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡುವುದಕ್ಕಾಗಿ 6 ನೇ ತರಗತಿಯಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಶ್ ಎಂದರೆ ಸ್ಟ್ಯಾಂಪ್ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನ, ಶೈಕ್ಷಣಿಕ ಪಠ್ಯಕ್ರಮ ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ, ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹದ ಹವ್ಯಾಸ ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.
ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, 2023-24 ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ/ ಫಿಲಾಟೆಲಿಕ್ ಕ್ಲಬ್ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ನೇ ತರಗತಿಯಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 6 ಸಾವಿರಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಿದೆ.
ಹಂತ-1 ಅಂಚೆಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು/ಪೋಸ್ಟ್ ಮಾಡಲು ಆಗಸ್ಟ್, 31 ಕೊನೆಯ ದಿನವಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಈ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಬಿ.ಎಸ್.ಸುದರ್ಶನ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಕೊಡಗು ಅಂಚೆ ವಿಭಾಗ ದೂ.ಸಂ. 9448291044 ನ್ನು ಸಂಪರ್ಕಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.