ಹೈದರಾಬಾದ್: ದೇಶದೆಲ್ಲೆಡೆ ರಾಖಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಹೋದರತ್ವ ಗಟ್ಟಿಗೊಳಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಗಣಿ ಸಚಿವ ಕಿಶನ್ ರೆಡ್ಡಿ ಅವರ ಪತ್ನಿ ಕಾವ್ಯಾ ತಿರುಮಲಗಿರಿಯ ಮಿಲಿಟರಿ ಆಸ್ಪತ್ರೆಯಲ್ಲಿ ರಕ್ಷಾ ಬಂಧನವನ್ನು ಆಚರಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ನಡುವೆ ದೇಶ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರು ರಕ್ಷಾಬಂಧನವನ್ನು ಆಚರಿಸಿದರು. ಕಾವ್ಯಾ ಸೈನಿಕರಿಗೆ ಮತ್ತು ರೋಗಿಗಳಿಗೆ ರಾಖಿಗಳನ್ನು ಕಟ್ಟಿ ಸಿಹಿ ತಿನ್ನಿಸಿ ರಕ್ಷಾಬಂಧನದ ಶುಭಾಶಯ ಕೋರಿದರು.
ದೇಶವನ್ನು ರಕ್ಷಿಸಲು ಸೈನಿಕರು ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ರೋಗಿಗಳ ರಕ್ಷಣೆಗೆ ಆಸ್ಪತ್ರೆ ವೈದ್ಯರು ನಿಂತಿದ್ದು, ಎಲ್ಲರಿಗೂ ರಕ್ಷಾಬಂಧನದ ಶುಭಾಶಯ ಎಂದು ಕಾವ್ಯಾ ತಿಳಿಸಿದ್ದಾರೆ.