ರಾಜ್ಯಪಾಲರ ಅವಹೇಳನ: ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಅವಹೇಳನಕಾರಿ ಟೀಕೆ, ಆರೋಪ ಮಾಡುತ್ತಿದ್ದಾರೆ. ಇದನ್ನು ಖಂಡಿಸಿರುವ ಬಿಜೆಪಿ ಕಾಂಗ್ರೆಸ್ ನಾಯಕರು ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮತ್ತು ರಾಜ್ಯಪಾಲರ ಅವಹೇಳನದ ವಿರುದ್ಧ ಆಗಸ್ಟ್ 22ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪಕ್ಷದ ಹಲವು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಹೋರಾಟದ ರೂಪುರೇಷೆ ಸಿದ್ದಪಡಿಸುವಂತೆ ವಿ. ಸುನಿಲ್ ಕುಮಾರ್ ಅವರಿಗೆ ಸೂಚಿಸಲಾಗಿದೆ. ದಲಿತ ಸಮುದಾಯದ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಗಲಭೆ ಸೃಷ್ಟಿಗೆ ಯತ್ನಿಸುತ್ತಿದೆ. ರಾಜ್ಯಪಾಲರ ಪರವಾಗಿ ನಿಲ್ಲಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದ್ದು, ರಾಜ್ಯಪಾಲರ ಅವಹೇಳನದ ವಿರುದ್ಧ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *