ಬೆಂಗಳೂರು: ನಟ ದರ್ಶನ್ ಅವರಿಗೆ ಜೈಲಲ್ಲಿ ರಾಜಾತಿಥ್ಯದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಕೆಲ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಅಂತ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ 7 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದರು.
ಆಗಸ್ಟ್.22ರಂದು ಸಂಜೆ ನಡೆದಿರುವಂತ ನಟ ದರ್ಶನ್ ಗೆ ರಾಜಾತಿಥ್ಯದ ಪೋಟೋಗಳು ತಡವಾಗಿ ಬೆಳಕಿಗೆ ಬಂದಿದ್ದಾವೆ. ಜೈಲಿನಲ್ಲಿ ಮೊಬೈಲ್ ಪೋನ್ ಬಳಕೆ, ಸಿಗರೇಟ್ ಸೇದಿರೋದು, ಕಾಫಿ ಕೊಟ್ಟಿರು ಬಗ್ಗೆ, ಜೊತೆಗೆ ಕುರ್ಚಿಗಳನ್ನು ಯಾರು ಕೊಟ್ಟರು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ. ಮೂರರಲ್ಲೂ ನಟ ದರ್ಶನ್ ಹೆಸರು ಉಲ್ಲೇಖಿಸಲಾಗಿದೆ ಎಂದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರವಾ ವೈಫಲ್ಯವಾಗಿಲ್ಲ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ಬಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸ್ಪಷ್ಟ ಪಡಿಸಿದ್ದಾರೆ