ಕಾಂಗ್ರೆಸ್ ಪಕ್ಷದ ನಾಯಕರಿಗೆ ನೈತಿಕತೆ ಇಲ್ಲ: ಮಾಜಿ ಸಚಿವ ಅಶ್ವತ್ಥನಾರಾಯಣ

ಕಾಂಗ್ರೆಸ್ ಪಕ್ಷದ ನಾಯಕರಿಗೆ ನೈತಿಕತೆ ಇಲ್ಲ

ಮಾಜಿ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ರಾಜಭವನ ಚಲೋ ನಡೆಸಲು ಕಾಂಗ್ರೆಸ್ ಪಕ್ಷದ ನಾಯಕರಿಗೆ ನೈತಿಕತೆ ಇಲ್ಲ, ಅವರ ವರಿಷ್ಠರಿಗೂ ನೈತಿಕತೆ ಇಲ್ಲ ಎಂದು ಮಾಜಿ ಸಚಿವ, ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

ನಗರದಲ್ಲಿ ಇಂದು ಮಾತನಾಡಿದ ಅವರು, ನಾವು ತಪ್ಪು ಮಾಡಿದರೆ ಬಂಧನ ಮಾಡುತ್ತಾರೆ. ಇವರು ತಪ್ಪು ಮಾಡಬಹುದು. ಅಧಿಕಾರ ದುರ್ಬಳಕೆ ಮಾಡಿ ಸಿದ್ದರಾಮಯ್ಯ ಸಾಕ್ಷಿ ಸಮೇತ ಸಿಕ್ಕಿಕೊಂಡಿದ್ದಾರೆ. ಮೊದಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

ಎನ್​ಡಿಎ ನಾಯಕರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಕೇಂದ್ರದ ಕೈಗೊಂಬೆಯಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಆಗ್ರಹಿಸಿದರು.

ಲೋಕಾಯುಕ್ತರು ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿದ್ರೂ ಹೆಚ್.ಡಿ. ಕುಮಾರಸ್ವಾಮಿ ಮೇಲೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿಲ್ಲ. ಜೊತೆಗೆ ಮುರುಗೇಶ್ ನಿರಾಣಿ, ಜನಾರ್ದನ್​ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆಯವರ ಮೇಲಿನ ಪ್ರಕರಣಗಳ ಸಂಬಂಧ ಕೂಡ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.

ಪಾದಯಾತ್ರೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್, ಕೆ.ಹೆಚ್. ಮುನಿಯಪ್ಪ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕರು ಮತ್ತು ಸಂಸದರು ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *