ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬಾಣಂತಿ ಸಾವು: ಬಳ್ಳಾರಿ ಆಸ್ಪತ್ರೆಯಲ್ಲಿ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಪರಿಶೀಲನೆ: ತಪ್ಪಿತಸ್ಥರ ವಿರುದ್ಧ ಕ್ರಮ

cm siddaramaiah

ಬೆಂಗಳೂರು : ರಾಜ್ಯದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಮಾಜದಲ್ಲಿ ಬಡವರು ಮತ್ತು ಕೆಳಮಧ್ಯಮ ವರ್ಗದವರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವಂತಹ ಗುಣಮಟ್ಟದ ಆರೋಗ್ಯ ಸೌಲಭ್ಯವು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *