ಬಳ್ಳಾರಿ : ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಕೊಪ್ಪಳದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ನೇಮಕಾತಿಯ ಮಾಹಿತಿ, ವಿದ್ಯಾರ್ಹತೆಯ ವಿವರಗಳು, ಅರ್ಜಿ ಸಲ್ಲಿಸುವ ಮಾಹಿತಿಗಳು ಇಲ್ಲಿವೆ.
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್ 6ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಜಿಲ್ಲಾ ಉದ್ಯೋಗಾಧಿಕಾರಿ ಪಿ. ಎಸ್. ಹಟ್ಟಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. ನೇರ ಸಂದರ್ಶನವು ನಗರದ ಸಿರುಗುಪ್ಪ ರಸ್ತೆಯ ಹವಂಭಾವಿ ಬಳಿಯ ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಎದುರು ಮಾಸ್ಸೆ ಫರ್ಗುಸನ್ ಟ್ರಾಕ್ಟಸ್, ಹೊಸ ಟ್ರಾಕ್ಟರ್ ಶೋರೂಂ, ಟಫೆ ಮಾಸ್ಸೆ ಫರ್ಗುಸನ್, ಬಳ್ಳಾರಿ ಇಲ್ಲಿ ನಡೆಯಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಸ್ವ ವಿವರಗಳೊಂದಿಗೆ ಹಾಜರಾಗಬೇಕು. ಆಸಕ್ತ ಆಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಿ ಅಥವಾ ಮೊಬೈಲ್ ಸಂಖ್ಯೆ 9742718891, 9663263086, 9900827768, 6360408094ಗೆ ಸಂಪರ್ಕಿಸಬಹುದು.
ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ: ಕೊಪ್ಪಳದ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ತಳಕಲ್ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳಲ್ಲಿ ಬೋಧನೆ ಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್, ಮೆಕಾನಿಕಲ್, ಎಲೆಕ್ಟಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗಗಳಲ್ಲಿ ಹಾಗೂ ಪ್ರಥಮ ವರ್ಷದ ವಿಷಯಗಳನ್ನು ಬೋಧನೆ ಮಾಡಲು ಅತಿಥಿ ಉಪನ್ಯಾಸಕರ ಅಗತ್ಯವಿದೆ.
ಎ.ಐ.ಸಿ.ಟಿ.ಇ. ನಿಯಮಾವಳಿಗಳನ್ವಯ ವಿದ್ಯಾರ್ಹತೆಯುಳ್ಳ ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸೆಪ್ಟೆಂಬರ್ 5ರ ಮಧ್ಯಾಹ್ನ 3 ಗಂಟೆಯೊಳಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ತಳಕಲ್ನ ಪ್ರಾಚಾರ್ಯರಿಗೆ ಖುದ್ದಾಗಿ ಸಲ್ಲಿಸಬೇಕು.
ಅತಿಥಿ ಉಪನ್ಯಾಸಕರ ನೇಮಕಾತಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ 1, 3 ಮತ್ತು 5 ನೇ ಸೆಮಿಸ್ಟರ್ಗೆ ಉಳಿಕೆಯಾಗಿರುವ ಕೋರ್ಸ್ಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಆಯ್ಕೆ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಐಸಿಟಿಇ ನಿಯಮಗಳನ್ವಯ ಕನಿಷ್ಠ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ 6ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಟೋ ಮೊಬೈಲ್ ವಿಭಾಗ 6, ಸಿವಿಲ್ ವಿಭಾಗ 1, ಎಲೆಕ್ಟ್ರಿಕಲ್ ವಿಭಾಗ 2, ಮೆಟಲರ್ಜಿ 6, ವಿಜ್ಞಾನ 2, ಇಂಗ್ಲೀಷ್ 1 ಮತ್ತು ಕನ್ನಡ 1 ಸೇರಿ ಒಟ್ಟು 19 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಹೆಚ್ಚಿನ ಮಾಹಿತಿಗಾಗಿ 08392-242228 ಸಂಖ್ಯೆಗೆ ಕರೆ ಮಾಡಿ.