ಭಾರತದ ಹೆಸರಾಂತ ಕುಸ್ತಿ ಪಟು ವಿನೇಶ್ ಪೊàಗಟ್ ಅವರು ವೈಯಕ್ತಿಕ ಕಾರಣಗಳನ್ನು ಕೊಟ್ಟು ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಕೆಲಸಕ್ಕೆ ರಾಜಿನಾಮೆ ಕೊಟ್ಟ ನಂತರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಕಾಂಗ್ರೇಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಗೊಂದಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸಲ್ಲಿಸಿದ ಸೇವೆ “ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಂಗತಿ ಎಂದಿದ್ದಾರೆ. ರಾಷ್ಟ್ರ ಸೇವೆ ಮಾಡಲು ರೈಲ್ವೆ ಇಲಾಖೆ ನೀಡಿದ್ದ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಸದಾ ಕೃತಜ್ಞಳಾಗಿರುತ್ತೇನೆಂದು ತಿಳಿಸಿರುತ್ತಾರೆ. ಮುಂದಿನ ತಿಂಗಳು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದೆ.ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿರುವುದರಿಂದ ಅಭ್ಯರ್ಥಿಯಾಗುವ ಸಂಭವಗಳನ್ನು ತಳ್ಳಿ ಹಾಕುವಂತಿಲ್ಲ.
ಇದಕ್ಕೂ ಮೊದಲು ಇವರನ್ನು ಪ್ಯಾರಿಸ್ ಒಲಿಂಪಿಕ್ಸ್ 100 ಗ್ರಾಂ, ಅಧಿಕ ತೂಕ ಹೊಂದಿದರೆಂಬ ಕಾರಣಕ್ಕಾಗಿ ಅನರ್ಹಗೊಳಿಸಲಾಗಿತ್ತು. ಅನರ್ಹಗೊಂಡ ನಂತರ, ಪೊàಗಟ್, ತನ್ನ ನಿವೃತ್ತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಅಲ್ಲಿ ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ವ್ರೆಸ್ಲಿಂಗ್ ಎಂದು ಬರೆದುಕೊಂಡಿದ್ದರು.ಇದಲ್ಲದೆ, ಪೊàಗಟ್ ಅವರು ಡಬ್ಲ್ಯುಎಫ್ ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ಸಿಂಗ್ ಅವರ ವಿರುದ್ಧ ಕುಸ್ತಿ ಪಟುಗಳೊಂದಿಗೆ ಕೂಡಿಕೊಂಡು ಪ್ರತಿಭಟನೆ ನಡೆಸಿದ್ದರು. ಪೊàಗಟ್ ರೈಲ್ವೆ ಇಲಾಖೆಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.