ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಯುವಕ, ಯುವತಿಯರಿಗೆ ಮಾಹಿತಿಯೊಂದಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 11ರಂದು ಸಂದರ್ಶನ ಆಯೋಜಿಸಲಾಗಿದೆ. ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗೆ ಅರ್ಜಿ ಮತ್ತು ಇಂಟರ್ನಶಿಪ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉದ್ಯೋಗ ಮಾಹಿತಿ, ವಿವರ, ಅಂತಿಮ ದಿನಾಂಕಗಳ ಮಾಹಿತಿಗಳು ಇಲ್ಲಿವೆ. ಆಸಕ್ತ, ಅರ್ಹರು ಸದುಪಯೋಗ ಪಡೆದುಕೊಳ್ಳಬಹುದು.
ಸೆಪ್ಟೆಂಬರ್ 11ರಂದು ಸಂದರ್ಶನ: ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕೆಲಸ ಮಾಡಲು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಸೆಪ್ಟೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.
ಜಿಲ್ಲಾ ಮಿಷನ್ ಸಂಯೋಜಕ, ಪ್ರಧಾನ ಮಂತ್ರಿ ಮಾತೃವಂದನಾ ಜಿಲ್ಲಾ ಸಂಯೋಜಕ ಹಾಗೂ ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಮಡಿಕೇರಿ ಇಲ್ಲಿ ಸಂದರ್ಶನ ನಡೆಸಲಾಗುತ್ತದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ 30 ನಿಮಿಷ ಮುಂಚೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-224451 ಅನ್ನು ಸಂಪರ್ಕಿಸಬಹುದು.
ಆಂಗ್ಲ ಭಾಷಾ ಶಿಕ್ಷಕರ ಹುದ್ದೆಗೆ ಅರ್ಜಿ: 2024-25ನೇ ಸಾಲಿಗೆ ಡಾ. ಎ. ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು. 2024-25ನೇ ಸಾಲಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಆಂಗ್ಲ ಭಾಷಾ ಶಿಕ್ಷಕರ ಸೇವೆಯನ್ನು ಪಡೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುತ್ತದೆ. ಡಾ. ಎ. ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ಶಾಲೆ ಶಾಲಾ ವಿಭಾಗ ಇಲ್ಲಿಗೆ ಆಂಗ್ಲ ಭಾಷೆ ಶಿಕ್ಷಕ 1 ಹುದ್ದೆ ಅಗತ್ಯವಿದ್ದು, ಅಭ್ಯರ್ಥಿಗಳು ಬಿಎ ಮತ್ತು ಬಿ.ಎಡ್ (ಇಂಗ್ಲೀಷ್) ವಿದ್ಯಾರ್ಹತೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು. ಕಛೇರಿ ದೂರವಾಣಿ ಸಂಖ್ಯೆ 08272 225528, 9686138688. ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 7676473767.