ಶಿವಮೊಗ್ಗ: ರಾಜ್ಯಪಾಲರು ನೀಡಿರುವ ಸಿದ್ದರಾಮಯ್ಯ ಮೇಲಿನ ಪ್ರಾಸಿಕ್ಯೂಷನ್ಗೆ ನ್ಯಾಯಾಲಯ ಅನುಮತಿ ಕೊಟ್ಟರೆ ಕಾಂಗ್ರೆಸ್ನಲ್ಲಿ ಮುಂದೆ ಮುಖ್ಯಮಂತ್ರಿ ಖುರ್ಚಿಗಾಗಿ ಯಕ್ಷಗಾನ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ಈಗಾಗಲೇ ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಸಿಎಂ ರೇಸ್ನಲ್ಲಿದ್ದಾರೆ. ಇದೀಗ ಬಸವರಾಜ ರಾಯರೆಡ್ಡಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೇಲ್ನೋಟಕ್ಕೆ ಇವರಲ್ಲರೂ ಸಿಎಂಗೆ ಬೆಂಬಲ ನೀಡುವುದಾಗಿ ಹೇಳುತ್ತಿದ್ದಾರೆ. ಆದರೆ ವಾಸ್ತವವಾಗಿ ಸಿಎಂ ಖುರ್ಚಿ ಮೇಲೆ ಅವರೆಲ್ಲರಿಗೂ ಹಂಬಲ ಹೆಚ್ಚಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಿದ್ದರಾಮಯ್ಯ ಬಿಟ್ಟು 135 ಶಾಸಕರಲ್ಲಿ ಯಾರಾದರೂ ನಮ್ಮ ಅಭ್ಯಂತರವಿಲ್ಲ. ಆದರೆ ಮೇಲ್ನೋಟಕ್ಕೆ ಸಿಎಂ ಪರ ಎಂದು ಕೆಲವರು ನಾಟಕವಾಡುತ್ತಿದ್ದಾರೆ. ಮುಡಾ ಹಗರಣದಲ್ಲಿ ಇಷ್ಟೊಂದು ಆಪಾದನೆಗಳು ಕೇಳಿಬಂದಿದ್ದು ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರಿಯುವುದು ಯೋಗ್ಯವಲ್ಲ. ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ ಇದೀಗ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿದ ಸಿಎಂ: ನನ್ನ ಮೇಲೆ ಮತ್ತು ಕೆ.ಜೆ.ಜಾರ್ಜ್ ಮೇಲೆ ಆರೋಪಗಳು ಬಂದ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವು. ಇಬ್ಬರ ವಿರುದ್ಧದ ಕೇಸ್ಗಳೂ ಬಿದ್ದುಹೋಗಿವೆ. ನಿರಪರಾಧಿಗಳೆಂದು ಕ್ಲೀನ್ಚೀಟ್ ಸಿಕ್ಕಿದೆ. ಜಾರ್ಜ್ ಅವರನ್ನು ಪುನಃ ಮಂತ್ರಿಯನ್ನಾಗಿ ಮಾಡಿದರು. ಆದರೆ ಆರು ಸ್ಥಾನ ಖಾಲಿ ಇದ್ದರೂ ನನ್ನನ್ನು ಸಚಿವರನ್ನಾಗಿ ಮಾಡಲಿಲ್ಲ. ಏಕೆ ಮಾಡಲಿಲ್ಲ ಎಂಬುದನ್ನು ಈಗ ಚರ್ಚಿಸಲು ಹೋಗಲ್ಲ. ಆದರೂ ನನಗೆ ಮೋಸ, ದ್ರೋಹ ಬಗೆದರು ಎಂದು ಈಶ್ವರಪ್ಪ ಕಿಡಿಕಾರಿದರು.
ಡಿಕೆಶಿಗೆ ಸಿಎಂಗೆ ಬಂಡೆಯಾಗಿ ನಿಲ್ಲುತ್ತಾರೋ?: ಎಂತಹದ್ದೇ ಆಪಾದನೆಗಳು ಬಂದರೂ ರಾಜೀನಾಮೆ ಕೊಡಬೇಕಿಲ್ಲ ಎಂಬ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿಯನ್ನು ಸಿದ್ದರಾಮಯ್ಯ ಹಾಕಿಕೊಟ್ಟಿದ್ದಾರೆ. ಐದು ವರ್ಷವೂ ಕಾಂಗ್ರೆಸ್ ಸರ್ಕಾರವೇ ಇರಲಿ. ಅದಕ್ಕಾಗಿ ಜನರು ಅವರನ್ನು ಆಯ್ಕೆ ಮಾಡಿದ್ದಾರೆ. ಆದರೂ ಅವರದ್ದೇ ಪಕ್ಷದ ಕೆಲ ಶಾಸಕರು ಈ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬೇಕಾದವರು ಸಿಎಂ ಆದರೆ ಮಾತ್ರ ಈ ಸರ್ಕಾರ ಸ್ವಲ್ಪ ದಿನ ಉಳಿಯಬಹುದು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂಗೆ ಬಂಡೆಯಾಗಿ ನಿಲ್ಲುತ್ತಾರೋ ಅಥವಾ ತಲೆ ಮೇಲೆಯೇ ಅದೇ ಬಂಡೆಯನ್ನು ಎತ್ತಿಹಾಕುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ ಎಂದು ವ್ಯಂಗ್ಯವಾಡಿದರು.
ಮಾಜಿ ಮೇಯರ್ ಸುವರ್ಣ ಶಂಕರ್, ನಗರಸಭೆ ಮಾಜಿ ಅಧ್ಯಕ್ಷ ಎಂ.ಶಂಕರ್, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ಎಸ್.ಜಿ.ಬಾಲು, ಶಂಕರ್ನಾಯಕ್, ಚನ್ನಬಸಪ್ಪ, ನಾಗರಾಜ್ ಜಾಧವ್ ಸುದ್ದಿಗೋಷ್ಠಿಯಲ್ಲಿದ್ದರು.
ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಬಿಡುಗಡೆ ಮಾಡದಿದ್ದರೆ ಜೈಲ್ಬರೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ತಳ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ್ದ ಹಣದ ದುರುಪಯೋಗವನ್ನು ಬಯಲಿಗೆಳೆದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಕುಟುಂಬ ತೀವ್ರ ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ತಾನು ಘೋಷಿಸಿದಂತೆ 25 ಲಕ್ಷ ರೂ. ಬಿಡುಗಡೆ ಮಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರಿಗೆ ಈ ಹಿಂದೆ ನಾನು ಮಾತುಕತೆ ನಡೆಸಿದ್ದೆ. ಅವರು ಸಿಎಂ ಜತೆ ಮಾತುಕತೆ ನಡೆಸಿ 10 ದಿನದೊಳಗೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ನಾವು ಇನ್ನೂ ಮೂರ್ನಾಲ್ಕು ದಿನ ಕಾಯುತ್ತೇವೆ. ನಂತರ ಹಣ ಬಿಡುಗಡೆ ಮಾಡದಿದ್ದರೆ ಸೆ.14ರಂದು 5 ಲಕ್ಷ ರೂ. ಅನ್ನು ಚಂದ್ರಶೇಖರನ್ ಕುಟುಂಬಕ್ಕೆ ನೀಡುತ್ತೇವೆ. ಸೆ.20ರೊಳಗೆ ಹಣ ಬಿಡುಗಡೆ ಮಾಡದಿದ್ದರೆ ಜೈಲ್ ಬರೋ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಷ್ಟ್ರಭಕ್ತರ ಬಳಗದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ನಮ್ಮನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರೆ ನಾವು ಅದನ್ನು ಒಪ್ಪುವುದಿಲ್ಲ. ಜೈಲಿಗೆ ಹಾಕಬೇಕೆಂದು ಒತ್ತಾಯಿಸುತ್ತೇವೆ ಎಂದರು.ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಬಿಡುಗಡೆ ಮಾಡದಿದ್ದರೆ ಜೈಲ್ಬರೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ತಳ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ್ದ ಹಣದ ದುರುಪಯೋಗವನ್ನು ಬಯಲಿಗೆಳೆದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಕುಟುಂಬ ತೀವ್ರ ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ತಾನು ಘೋಷಿಸಿದಂತೆ 25 ಲಕ್ಷ ರೂ. ಬಿಡುಗಡೆ ಮಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರಿಗೆ ಈ ಹಿಂದೆ ನಾನು ಮಾತುಕತೆ ನಡೆಸಿದ್ದೆ. ಅವರು ಸಿಎಂ ಜತೆ ಮಾತುಕತೆ ನಡೆಸಿ 10 ದಿನದೊಳಗೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ನಾವು ಇನ್ನೂ ಮೂರ್ನಾಲ್ಕು ದಿನ ಕಾಯುತ್ತೇವೆ. ನಂತರ ಹಣ ಬಿಡುಗಡೆ ಮಾಡದಿದ್ದರೆ ಸೆ.14ರಂದು 5 ಲಕ್ಷ ರೂ. ಅನ್ನು ಚಂದ್ರಶೇಖರನ್ ಕುಟುಂಬಕ್ಕೆ ನೀಡುತ್ತೇವೆ. ಸೆ.20ರೊಳಗೆ ಹಣ ಬಿಡುಗಡೆ ಮಾಡದಿದ್ದರೆ ಜೈಲ್ ಬರೋ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಷ್ಟ್ರಭಕ್ತರ ಬಳಗದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ನಮ್ಮನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರೆ ನಾವು ಅದನ್ನು ಒಪ್ಪುವುದಿಲ್ಲ. ಜೈಲಿಗೆ ಹಾಕಬೇಕೆಂದು ಒತ್ತಾಯಿಸುತ್ತೇವೆ ಎಂದರು.