ಬೆಂಗಳೂರು: ಬಿಜೆಪಿ ಅವಧಿಯ ಅಕ್ರಮ ಆರೋಪಗಳ ತನಿಖೆಗೆ ವೇಗ ನೀಡಲು ಸಿಎಂ ಸಿದ್ದರಾಮಯ್ಯ ಐವರು ಸಚಿವರ ಸಮಿತಿ ರಚಿಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದ ಈ ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆ.
ಸರ್ಕಾರದ ಹಾಗೂ ತನಿಖಾ ಸಂಸ್ಥೆಗಳ ಹಂತದಲ್ಲಿರುವ ವಿವಿಧ ಹಗರಣಗಳ ತನಿಖಾ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಈ ಸಮಿತಿ ಕ್ರಮವಹಿಸಲಿದೆ. ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಇದರೊಂದಿಗೆ ಮುಡಾ, ವಾಲ್ಮೀಕಿ ಅಭಿವೃದ್ಧಿ ಅಕ್ರಮ ಸಂಬಂಧ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಪ್ರತಿಪಕ್ಷ ಬಿಜೆಪಿಗೆ ಕೌಂಟರ್ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಬಿಜೆಪಿ ಅವಧಿಯಲ್ಲಿನ 21 ಹಗರಣಗಳ ಆರೋಪಗಳ ಬಗ್ಗೆ ವಿವಿಧ ಹಂತಗಳಲ್ಲಿ ತನಿಖೆ ನಡೆಯುತ್ತಿದೆ.