ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ ಬಂಧನ 

ಶಾಸಕ ಮುನಿರತ್ನ

ಶಾಸಕ ಮುನಿರತ್ನ

ಬೆಂಗಳೂರು : BBMP ಗುತ್ತಿಗೆದಾರನಿಂದ 30 ಲಕ್ಷಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿರುವ ಆರೋಪದಡಿ ರಾಜರಾಜೇಶ್ವರಿ ನಗರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶಾಸಕ ಮುನಿರತ್ನ ರನ್ನ ವಶಕ್ಕೆ ಪಡೆದಿದ್ದಾರೆ.

ಕೋಲಾರದ ಪೊಲೀಸರ ನೆರವಿನೊಂದಿಗೆ ಬೆಂಗಳೂರು ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದು, ಬೆಂಗಳೂರಿನತ್ತ ಕರೆತಂದಿದ್ದರು. ಮುನಿರತ್ನ ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೋಲಾರ ಎಸ್​​ಪಿ ನಿಖಿಲ್ ಮಾಹಿತಿ ನೀಡಿದ್ದರು.

ಬಳಿಕ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. ಇತರ ಆರೋಪಿಗಳಾದ ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಮತ್ತು ರವಿಶಂಕರ್ ಕೂಡ ಪೊಲೀಸರ ಮುಂದೆ ಶರಣಾಗಿದ್ದಾರೆ.

ಬೆಂಗಳೂರು ಪೊಲೀಸರು ಮುನಿರತ್ನ ಅವರನ್ನು ವಿಚಾರಣೆ ಬಳಿಕ ವಾಯ್ಸ್ ಸ್ಯಾಂಪಲ್ಸ್ ಪಡೆದುಕೊಳ್ಳಲಿದ್ದಾರೆ. ವೈರಲ್ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದ ಮುನಿರತ್ನ, ”ಆಡಿಯೊದಲ್ಲಿನ ಧ್ವನಿ ತನ್ನದಲ್ಲ” ಎಂದಿದ್ದರು. ಹೀಗಾಗಿ, ಸತ್ಯಾಸತ್ಯತೆ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಎಫ್​ಎಎಸ್​​ಎಲ್​ಗೆ ಕಳುಹಿಸಲಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಮುನಿರತ್ನ, ”ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದು. 15 ವರ್ಷದಿಂದ ನನ್ನ ಮೇಲೆ ಯಾವೊಬ್ಬ ಗುತ್ತಿಗೆದಾರರು ಆರೋಪಿಸಿರಲಿಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ನನ್ನ ಮೇಲೆ ಸಂಚು ರೂಪಿಸಿದ್ದಾರೆ. ದೂರು ಕೊಟ್ಟ ವ್ಯಕ್ತಿ 7-8 ವರ್ಷಗಳಿಂದ ನಮ್ಮಲ್ಲಿ ಕೆಲಸ ಮಾಡುತ್ತಿದ್ದ. ಎಂದಿಗೂ ದೂರು ಕೊಡದವನು ನಿನ್ನೆ ನನ್ನ ಮೇಲೆ ದೂರು ಕೊಟ್ಟಿದ್ದಾರೆ.

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಅಕ್ರಮಕ್ಕೆ ಸಂಬಂಧಿಸಿದಂತೆ ನಾನು ಪತ್ರ ಬರೆದಿದ್ದೆ. ಪ್ರತಿ ತಿಂಗಳು 15 ಲಕ್ಷ ರೂ. ಅವ್ಯವಹಾರ ಆಗುತ್ತಿರುವುದು ಕಂಡು ಬಂದು, ತನಿಖೆ ಮಾಡಿ ಎಂದು ಪತ್ರ ಬರೆದ ಹಿನ್ನೆಲೆಯಲ್ಲಿ ನನ್ನ ಮೇಲೆ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಸಮರ್ಥಿಸಿಕೊಂಡಿದ್ದರು.

Leave a Reply

Your email address will not be published. Required fields are marked *