ವಾಹನಗಳಿಗೆ HSRP ಅಳವಡಿಕೆಗೆ ಇಂದು ಕೊನೆಯ ದಿನ

ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ

ಬೆಂಗಳೂರು : ರಾಷ್ಟ್ರದಾದ್ಯಂತ ವಾಹನಗಳಿಗೆ ಕಡ್ಡಾಯಗೊಳಿಸಿದ ಹೈಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಇಂದು ಕೊನೆಯ ದಿನಾಂಕವಾಗಿದೆ.

ಈಗಾಗಲೇ ಮೂರು ಬಾರಿಯ ಗಡುವು ವಿಸ್ತರಣೆಯ ನಂತರವೂ ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ನಂಬರ್ ಪ್ಲೇಟ್ ಅಳವಡಿಸಲಾಗಿದೆ ಎನ್ನಲಾಗಿದೆ. ಹೆಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಸದ ಸವಾರರಿಗೆ ನಾಳೆಯಿಂದ ದಂಡದ ಬಿಸಿ ಬೀಳಲಿದೆ.

ಆದಾಗ್ಯೂ ಸಹ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧ ಸೆಪ್ಟಂಬರ್ 18ರಂದು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರಲಿದ್ದು, ಮತ್ತೊಮ್ಮೆ ಗಡುವು ವಿಸ್ತರಣೆ ಅಥವಾ ದಂಡ ವಿಧಿಸುವುದರ ಕುರಿತು ನಿರ್ಧಾರವಾಗಲಿದೆ. ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ.26ರಷ್ಟು ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಸಲಾಗಿದ್ದು, HSRP ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುವ ವಾಹನ ಮಾಲೀಕರು 500 ರೂ ದಂಡ ಪಾವತಿಸಬೇಕಾಗುತ್ತದೆ. ಸೆಪ್ಟೆಂಬರ್ 16 ರಿಂದ ಸಂಚಾರ ಪೊಲೀಸರು ಕಾರ್ಯಾಚರಣೆ ಆರಂಭಿಸುವ ಸಾಧ್ಯತೆ ಇದೆ.

2019ರ ಏಪ್ರಿಲ್‌ 1ಕ್ಕೂ ಮೊದಲು ನೋಂದಾಯಿಸಲ್ಪಟ್ಟಿರುವ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್ ತಿಂಗಳಿನಲ್ಲಿ ಕೇಂದ್ರ ಸಾರಿಗೆ ಇಲಾಖೆ ಹೊರಡಿಸಿತ್ತು. ಆರಂಭದಲ್ಲಿ ಕೆಲ ತಾಂತ್ರಿಕ ಮತ್ತಿತರ ಕಾರಣಗಳಿಂದಾಗಿ 2023ರ ನವೆಂಬರ್ 17 ರ ಗಡುವು ವಿಸ್ತರಿಸಲಾಗಿತ್ತು.

Leave a Reply

Your email address will not be published. Required fields are marked *