ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ 5.56 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲು

ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ 5.56 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಜುಲೈ 1ರಿಂದ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಜಾರಿಗೆ ಬಂದಿದ್ದು ಇಲ್ಲಿಯವರೆಗೂ ದೇಶಾದ್ಯಂತ 5.56 ಲಕ್ಷಕ್ಕೂ ಹೆಚ್ಚು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳ ಸುಗಮ ಅನುಷ್ಠಾನಕ್ಕಾಗಿ ಗೃಹ ವ್ಯವಹಾರಗಳ ಸಚಿವಾಲಯವು ವೀಡಿಯೋಗ್ರಫಿ ಮತ್ತು ಛಾಯಾಗ್ರಹಣದ ಮೂಲಕ ಸಾಕ್ಷ÷್ಯವನ್ನು ಸಂಗ್ರಹಿಸಲು ಇ-ಸಾಕ್ಷ್ಯ ಸೇರಿದಂತೆ ಹಲವಾರು ಮೊಬೈಲ್ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸಿದೆ. ಈ ಅಪ್ಲಿಕೇಶನ್ ಅನ್ನು 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಳವಡಿಸಿಕೊಂಡಿವೆ. ಇಪ್ಪತ್ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇದನ್ನು ಪರೀಕ್ಷಿಸಿವೆ.

ವಸಾಹತುಶಾಹಿ ಯುಗದ ಭಾರತ ದಂಡ ಸಂಹಿತೆ ,ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯಿದೆ 1872ಗೆ ಬದಲಿಗೆ ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ , ಮತ್ತು ಭಾರತೀಯ ಸಾಕ್ಷಿ ಅಧಿನಿಯಮ ವನ್ನು ಜಾರಿಗೆ ತರಲಾಗಿದೆ.

Leave a Reply

Your email address will not be published. Required fields are marked *