ಅವಮಾನಕರ ಆರೋಪ :  ಸಿಬಿಐಗೆ ಸುಪ್ರೀಂ ಕೋರ್ಟ್ ತರಾಟೆ

ತಿರುಪತಿ ಲಡ್ಡು ವಿವಾದ || ತನಿಖೆಗಾಗಿ SIT ರಚಿಸಿ ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳು ಮುಗಿದ ನಂತರ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬAಧಿಸಿದ ಪ್ರಕರಣಗಳನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ನ್ಯಾಯಾಲಯಗಳ ವಿರುದ್ಧ ‘ಅವಮಾನಕರ ಆರೋಪಗಳನ್ನು’ ಮಾಡಿದ್ದಕ್ಕಾಗಿ ಸಿಬಿಐ ಅನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಪಂಕಜ್ ಮಿತ್ತಲ್ ಅವರಿದ್ದ ನ್ಯಾಯಪೀಠ, ‘ಪಶ್ಚಿಮ ಬಂಗಾಳದಲ್ಲಿನ ಇಡೀ ನ್ಯಾಯಾಂಗದ ವಿರುದ್ಧ ಸಿಬಿಐ ಈ ರೀತಿ ಆಪಾದನೆ ಮಾಡುವುದು ಸರಿಯಲ್ಲ’ ಎಂದು ಹೇಳಿದೆ.

‘ರಾಜು ಅವರೇ, ಯಾವ ಆಧಾರಗಳ ಮೇಲೆ ಇಂತಹ ಆರೋಪಗಳನ್ನು ಮಾಡಲಾಗಿದೆ? ಇಡೀ ಪಶ್ಚಿಮ ಬಂಗಾಳದಲ್ಲಿ ದ್ವೇಷಪೂರ್ಣ ವಾತಾವರಣ ಇದೆ ಎಂಬುದಾಗಿ ನೀವು ಹೇಳುತ್ತಿದ್ದೀರಿ’ ಎಂದು ಸಿಬಿಐ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರನ್ನು ಉದ್ದೇಶಿಸಿ ಪೀಠ ಹೇಳಿತು.

‘ನ್ಯಾಯಾಂಗ ಇಲಾಖೆಯ ನಿರ್ದಿಷ್ಟ ಅಧಿಕಾರಿಯೊಬ್ಬರನ್ನು ಅಥವಾ ಒಂದು ರಾಜ್ಯವನ್ನು ನಿಮ್ಮ ಅಧಿಕಾರಿಗಳು ಇಷ್ಟಪಡದೇ ಇರಬಹುದು. ಆದರೆ, ಇದನ್ನೇ ಆಧಾರವನ್ನಾಗಿಟ್ಟುಕೊಂಡು ಇಡೀ ನ್ಯಾಯಾಂಗ ವ್ಯವಸ್ಥೆಯೇ ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ ಎನ್ನಬೇಡಿ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಗಳ ನ್ಯಾಯಾಧೀಶರು ಇಲ್ಲಿ ಹಾಜರಾಗಿ ತಮ್ಮನ್ನು ಸಮರ್ಥನೆ ಮಾಡಿಕೊಳ್ಳಲಾಗದು’ ಎಂದು ಪೀಠ ಹೇಳಿತು. ನ್ಯಾಯಪೀಠವು ಕಟುಮಾತುಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ನಂತರ, ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರು, ಪ್ರಕರಣಗಳ ವರ್ಗಾವಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದರು.

Leave a Reply

Your email address will not be published. Required fields are marked *