ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರ ವಿರುದ್ದ ಈಗಾಗಲೇ ಮೂರು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಚಾರ್ಜ್ ಶೀಟ್ ನಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಸಾಕ್ಷಿಗಳು ಸಿಕ್ಕಿದೆ. ಅಲ್ಲದೆ ಲೈಂಗಿಕ ಹಗರಣ ಕುರಿತ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಪ್ರಕ್ರಿಯೆ ಅತ್ಯಂತ ದೊಡ್ಡ ಪಾಪ ಕೃತ್ಯ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ನಂತರದ ಪ್ರಕ್ರಿಯೆ ರದ್ದು ಪಡಿಸುವಂತೆ ಕೋರಿ ಬಿಜೆಪಿ ಮಾಜಿ ಶಾಸಕ ಪ್ರಥಮ್ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗ ಪ್ರಸನ್ನ ಅವರ ಏಕ ಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ ಅಲ್ಲದೆ ಈ ರೀತಿಯ ಪಾಪ ಕೃತ್ಯದಿಂದ ಸಂತ್ರಸ್ತೆಯರನ್ನು ಅವಮಾನಕ್ಕೆ ಗುರಿ ಮಾಡಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು
ಪ್ರಜ್ವಲ್ ರೇವಣ್ಣ ಪ್ರಕರಣ ಹೈಕೋರ್ಟ್ ಅಭಿಪ್ರಾಯ.
