ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ಕೇರಳದ ಚಾಲಕ ಅರ್ಜುನ್ ಮೃತದೇಹ ಪತ್ತೆ

ಶೋಧ ಕಾರ್ಯಾಚರಣೆ

ಶೋಧ ಕಾರ್ಯಾಚರಣೆ

ಕಾರವಾರ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದೆ.

ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಆ ಪೈಕಿ 8 ಮಂದಿ ಮೃತದೇಹ ಪತ್ತೆಯಾಗಿತ್ತು. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ.

ಗಂಗಾವಳಿ ನದಿಯಿಂದ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇಂದು ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದನ್ನು ಮೇಲೆತ್ತುವ ವೇಳೆ ಲಾರಿಯಲ್ಲೇ ಅರ್ಜುನ್ ಮೃತದೇಹ ಪತ್ತೆಯಾಗಿದೆ. ಇನ್ನು ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ. ಇದೇ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದ್ದು ಅದು ಯಾರು ಎಂಬುದು ಇನ್ನಷ್ಟೇ ಪತ್ತೆಯಾಗಬೇಕಿದೆ

Leave a Reply

Your email address will not be published. Required fields are marked *