UPSC ಮಾದರಿಯಲ್ಲಿ KPSC ಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯ ಸೂಚನೆ

200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : UPSC ಮಾದರಿಯಲ್ಲೇ KPSC ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕುಗಳು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಚರ್ಚೆ ನಡೆಸಿದರು.

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ತಿಳಿಸಿದರು.

ಬಳಿಕ ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು. ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು

Leave a Reply

Your email address will not be published. Required fields are marked *