ಪ್ರವಾಹ, ಭೂಕುಸಿತಕ್ಕೆ ನೇಪಾಳ ತತ್ತರ

ಪ್ರವಾಹ, ಭೂಕುಸಿತಕ್ಕೆ ನೇಪಾಳ ತತ್ತರ

ಪ್ರವಾಹ, ಭೂಕುಸಿತಕ್ಕೆ ನೇಪಾಳ ತತ್ತರ

ನೇಪಾಳ): ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ ನೇಪಾಳದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನೂರರ ಗಡಿ ದಾಟಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 102ಕ್ಕೇರಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪೂರ್ವ ಮತ್ತು ಮಧ್ಯ ನೇಪಾಳದ ಪ್ರಮುಖ ಪ್ರದೇಶಗಳು ಜಲಾವೃತವಾಗಿದ್ದು, ದೇಶದ ಕೆಲವು ಭಾಗಗಳಲ್ಲಿ ಹಠಾತ್ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಧಾನಿ ಕಠ್ಮಂಡು ಸೇರಿ ದೇಶದಾದ್ಯಂತ 48 ಜನರು ಸಾವನ್ನಪ್ಪಿದ್ದಾರೆ. 64 ಜನರು ನಾಪತ್ತೆಯಾಗಿದ್ದಾರೆ. 45 ಜನರು ಗಾಯಗೊಂಡಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆ ಮಾಹಿತಿ ನೀಡಿದೆ.

ಕನಿಷ್ಠ 195 ಮನೆಗಳು ಮತ್ತು ಎಂಟು ಸೇತುವೆಗಳು ಹಾನಿಗೊಳಗಾಗಿವೆ. ಭದ್ರತಾ ಸಿಬ್ಬಂದಿ ಸುಮಾರು 3,100 ಜನರನ್ನು ರಕ್ಷಿಸಿದ್ದಾರೆ. ಕಳೆದ 40-45 ವರ್ಷಗಳಲ್ಲಿ ಕಠ್ಮಂಡುವಿನಲ್ಲಿ ಇಂತಹ ವಿನಾಶಕಾರಿ ಪ್ರವಾಹ ಮತ್ತು ಭೂಕುಸಿತ ನೋಡಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *