ಚುನಾವಣೆ ವೆಚ್ಚಕ್ಕಾಗಿ 50 ಕೋಟಿ ಬೇಡಿಕೆ : ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ಕುರಿತು ಹರಡಿದ ವದಂತಿ; ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿರುವ

ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ತಾತಾ ಎಂಬುವರು ಇಬ್ಬರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ಕೆಲವು ಜಾಲತಾಣಗಳು ವರದಿ ಮಾಡಿವೆ. ಹೆಚ್‌ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ಮಾಡಿ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಿ ಹೆಚ್ ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *