ಮಂದಸೌರ್: ಮಹಿಳೆಯನ್ನು ಹಿಂಬಾಲಿಸಿದ್ದ ಆರೋಪದ ಮೇರೆಗೆ ದಲಿತ ವ್ಯಕ್ತಿಯ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಅರೆಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಮಂದಸೌರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ)ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಕಳೆದ ವಾರ ಭೈಸೋದಾಮಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಆನಂದ್ ತಿಳಿಸಿದ್ದಾರೆ. ವಿಡಿಯೋದಲ್ಲಿ ಅರೆಬೆತ್ತಲಾದ ವ್ಯಕ್ತಿಯ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ದೃಶ್ಯವಿದೆ.