ಎರಡು ವರ್ಷಗಳ ನಂತರ ಗಾಂಧಿ ಭವನ ಉದ್ಘಾಟನೆ

ಎರಡು ವರ್ಷಗಳ ನಂತರ ಗಾಂಧಿ ಭವನ ಉದ್ಘಾಟನೆ

ಚಿಕ್ಕಬಳ್ಳಾಪುರ: ಕಳೆದ 2017 ರಲ್ಲಿ ಗಾಂದಿ ಭವನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದು 2022 ರಲ್ಲಿ ಕಟ್ಟಡದ ಕಾಮಗಾರಿ ಪ್ರಾರಂಭಿಸಿ ಎರಡು ವರ್ಷಗಳ ನಂತರ ಗಾಂಧಿ ಭವನ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುದಾಕರ್ ಅವರು ಲೋಕಾರ್ಪಣೆ ಮಾಡಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಗ್ರಂಥಾಲಯ ಸಮೀಪ, ಕೆಎಸ್.ಆರ್.ಟಿಸಿ ಬಸ್ ನಿಲ್ದಾಣದ ಮುಂಬಾಗ 3 ಕೋಟಿ ರೂ  ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದ ಗಾಂದಿ ಭವನ ಕಟ್ಟಡ ಉದ್ಘಾಟನೆಯ ಕಾರ್ಯಕ್ರಮವನ್ನು ಜಿಲ್ಲಾಢಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಹಿಸಿದ್ದರು. ಗಾಂದಿ ಭವನದ ಕಾಮಗಾರಿಯನ್ನು ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರ ನಿರ್ವಹಿಸಿತ್ತು ಈ ವೇಳೆ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *