Chennai Airshow: 4 ಮಂದಿ ಸಾವು, 250ಕ್ಕೂ ಅಧಿಕ ಮಂದಿ ಅಸ್ವಸ್ಥ

Chennai Airshow

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮದ ವೇಳೆ 4 ಮಂದಿ ಸಾವನ್ನಪ್ಪಿದ್ದು, 250ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ ವೀಕ್ಷಿಸಲು ತೆರಳಿದ್ದ 4 ಮಂದಿ ಪೇಕ್ಷಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಹೀಟ್ ಸ್ಟ್ರೋಕ್ ಕಾರಣ ಎಂದು ವೈದ್ಯರು ಹೇಳಿದ್ದಾರೆ. ಅಂತೆಯೇ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಲ್ಲಿ 250ಕ್ಕೂ ಅಧಿಕ ಮಂದಿ ಸಿಲುಕಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 20ಕ್ಕೂ ಹೆಚ್ಚು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತೀಯ ವಾಯುಸೇನೆಯ 92ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಚೆನ್ನೈ ಮರೀನಾ ಬೀಚ್ ನಲ್ಲಿ ವಾಯುಸೇನೆ ಏರ್ ಶೋ ಆಯೋಜಿಸಿದ್ದು, ಈ ವಾಯುಶೋ ವೀಕ್ಷಣೆಗೆ ಬರೊಬ್ಬರಿ 5 ಲಕ್ಷ ಮಂದಿ ಆಗಮಿಸಿದ್ದರು ಎನ್ನಲಾಗಿದೆ. ಬೆಳಗ್ಗೆ 11 ಗಂಟೆಗೆ ಏರ್ ಶೋ ಆರಂಭವಾಗಿದ್ದು, ಈ ವೇಳೆ ಬಿಸಿಲಿನ ಝಳಕ್ಕೆ ಹಲವರು ಅನಾರೋಗ್ಯಕ್ಕೀಡಾಗಿದ್ದು, ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *