ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸರಕಾರವು ಇರುತ್ತೆ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಇಂದು ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರವು ಇರುತ್ತೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಹಾಗಾಗಿ ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ ನಮ್ಮ ಸರ್ಕಾರ ಹಾಗೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು.
ಅದೇ ರೀತಿಯಾಗಿ ಹರಿಯಾಣದಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲು ಆಗಿರುವ ವಿಚಾರವಾಗಿ ಮಾತನಾಡಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿರುವ ಕುರಿತು ಪರಿಶೀಲನೆ ಮಾಡುತ್ತೇವೆ. ನಾವು ಎಲ್ಲಿ ಎಡವಿದ್ದೇವೆ ಅಂತ ಪರಿಶೀಲಿಸುತ್ತೇವೆ. ಜನರು ಕೊಟ್ಟಿರುವ ತೀರ್ಪಿನ ಬಗ್ಗೆ ನಾವೆಲ್ಲರೂ ಗೌರವ ಕೊಡಲೇಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮುಡಾ ಪ್ರಕರಣ ಪ್ರಸ್ತಾಪಿಸಿದ್ದಕ್ಕೆ ಕಾಂಗ್ರೆಸ್ಗೆ ಹಿನ್ನಡೆ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹರಿಯಾಣ ಫಲಿತಾಂಶಕ್ಕೂ ಮುಡಾ ಕೇಸಿಗೆ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ಸಿನ ಯಾರೂ ಕೂಡ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದು ಕೂಡ ಸಂಬಂಧವಿಲ್ಲ. ಮುಡಾದಲ್ಲಿ ಹಗರಣ ಆರೋಪ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.