ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಕುತೂಹಲ ಮೂಡಿಸಿದ ಡಿನ್ನರ್ ಮೀಟಿಂಗ್ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆಯ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿದ್ದು ಮಹದೇವಪ್ಪ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸದ್ದು ಮಾಡುತ್ತಿದ್ದೆ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಮನೆಯಲ್ಲಿ ಡಿನ್ನರ್ ಏರ್ಪಾಡು ಮಾಡಲಾಗಿತ್ತು. ಊಟಕ್ಕೆ ಹೋಗಿದ್ದೆವು. ಯಾವ ಮೀಟಿಂಗ್ ಇಲ್ಲ, ಡಿನ್ನರ್ ಅಷ್ಟೇ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಹಜವಾಗಿ ಊಟಕ್ಕೆ ಸೇರಿದ್ದೆವು ಎಂದು ತಿಳಿಸಿದರು

ಡಿನ್ನರ್ನಲ್ಲಿ ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಶಾಸಕ ಎ.ಆರ್ ಕೃಷ್ಣ ಮೂರ್ತಿ ಭಾಗಿಯಾಗಿದ್ದೆವು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಊಟದ ವೇಳೆ ಸಿಎಂ ಬದಲಾವಣೆ ಅದು ಇದು ಯಾವ ವಿಚಾರವೂ ಚರ್ಚೆ ಮಾಡಿಲ್ಲ. ವಿರೋಧ ಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ. ಕಾಂಗ್ರೆಸ್ನಲ್ಲಿ ಯಾವ ಬದಲಾವಣೆ ಬಗ್ಗೆಯೂ ಚರ್ಚೆ ಆಗಿಲ್ಲ ಎಂದರು

ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ನಾವು ಆಗಾಗ ಈ ರೀತಿ ಸೇರುತ್ತಿರುತ್ತೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು. ದಲಿತ ಸಿಎಂ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯ ಈ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *