ಕೋಳಿ ಸಾಕಾಣಿಕೆ ಮಾಡಬೇಕಾ..? ಇಲ್ಲಿದೆ ನೋಡಿ ತುಮಕೂರಿನ ರೈತರಿಗೆ ಗುಡ್ ನ್ಯೂಸ್

ಕೋಳಿ ಸಾಕಾಣಿಕೆ ಮಾಡಬೇಕಾ..? ಇಲ್ಲಿದೆ ನೋಡಿ ತುಮಕೂರಿನ ರೈತರಿಗೆ ಗುಡ್ ನ್ಯೂಸ್

ತುಮಕೂರು : ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕೋಳಿ ಸಾಕಾಣಿಕೆ ಕುರಿತು ಅಕ್ಟೋಬರ್ 18 ಮತ್ತು 19 ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು .

Leave a Reply

Your email address will not be published. Required fields are marked *