ನವದೆಹಲಿ: ಡೀಪ್ ಫೇಕ್ ವಿಡಿಯೋಗಳಿಗೆ ತುತ್ತಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಇದೀಗ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ಹೌದು.. ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ.
ಈ ಕುರಿತು ಖುದ್ದು ನಟಿ ವಿಷಯ ತಿಳಿಸಿದ್ದು, ‘ಕೆಲವು ವರ್ಷಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಅದು ಸೈಬರ್ ಕ್ರೈಂ. ಅದರ ನಂತರ ನಾನು ಸೈಬರ್ ಅಪರಾಧಗಳ ವಿರುದ್ಧ ಹೋರಾಡಬೇಕು ಎಂದು ಯೋಚಿಸಿದೆ.
ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೆ. ಆ ನಿಮಿತ್ತ ಕಾರ್ಯಯೋಜನೆ ರೂಪಿಸಿದ್ದೆ ಎಂದು ತಮ್ಮ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.