ಮಹತ್ವಾಕಾಂಕ್ಷಿ  “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆ

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆ

ಬೆಂಗಳೂರು: ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ”ಗೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.

ಬೆಂಗಳೂರು BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು  ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ  ಬುಧವಾರ ಲೋಕಾರ್ಪಣೆಗೊಳಿಸಿದರು.

ಇದೇ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಕಾವೇರಿ ಮಾತೆಗೆ ಸಮರ್ಪಿಸಿದರು. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ. ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮAತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *