ತುಮಕೂರು:- ತಲ್ವಾರ್ ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.
ಈ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದ್ದು, ತಲ್ವಾರ್ ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ರಸ್ತೆ ಮಧ್ಯದಲ್ಲಿ ತಲ್ವಾರ್ ಹಿಡಿದು ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಶಾರುಖ್, ಮುಗಲ್ ಪಾಷ ಎಂಬ ಯುವಕರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಬಾಸ್ ಎಂದು ಕೇಕ್ ಮೇಲೆ ಬರೆಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ತಲ್ವಾರ್ ನಲ್ಲಿ ಕೇಕ್ ಕತ್ತರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,
ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿಕೊಂಡು ಪುಂಡಾಟ ಮೆರೆದಿದ್ದಾರೆ. ಜನರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವುದಕ್ಕೆ ಖಂಡನೆ ವ್ಯಕ್ತವಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.