ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಈ ತರಬೇತಿಯು 2025ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿ ಮಾಹೆಯಿಂದ ಪ್ರಾರಂಭಗೊಡು ಡಿಸೆಂಬರ್ 2025ಕ್ಕೆ ಕೊನೆಗೊಳ್ಳಲಿದೆ.  ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಇರುವ,  ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರುವ  ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು 35ವರ್ಷ ಮೀರಿರಬಾರದು. 

ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. 

ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಅಂತಿಮ ವರ್ಷದ ಪದವಿ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.  ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತರಬೇತಿ ಅವಧಿಯಲ್ಲಿ ಮಾಹೆಯಾನ 15ಸಾವಿರ ರೂ. ಗಳ ಶಿಷ್ಯವೇತನ ನೀಡಲಾಗುವುದು. ಈ ತರಬೇತಿಯು ತಾತ್ಕಾಲಿಕವಾಗಿರುತ್ತದೆ.  ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವAತೆ ಒತ್ತಡ ತರುವಂತಿಲ್ಲ. ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡಲು ಅವಕಾಶವಿಲ್ಲ. ತರಬೇತಿ ಮಧ್ಯದಲ್ಲಿ ಬಿಟ್ಟುಹೋದರೆ ಅವಧಿಗೆ ಮುನ್ನ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಸರ್ಕಾರಿ/ಖಾಸಗಿ ಸಂಸ್ಥೆಯಲ್ಲಿ ಖಾಯಂ ಉದ್ಯೋಗ ಸಿಕ್ಕಿದಲ್ಲಿ ಷರತ್ತಿಗೊಳಪಟ್ಟು ಮೂಲ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದು.

ಒಮ್ಮೆ ಫಲಾನುಭವಿಯಾದವರನ್ನು ಈ ತರಬೇತಿಯ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.  ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20ರೂ.ಗಳ ಛಾಪಾ ಕಾಗದದಲ್ಲಿ ಲಿಖಿತವಾಗಿ ಹೇಳಿಕೆ ನೀಡಬೇಕು. ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಪದವಿ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ಪೋರ್ಟ್ ಅಳತೆಯ ಇತ್ತೀಚಿನ2 ಭಾವಚಿತ್ರ ಹಾಗೂ ಆಧಾರ್ ಕಾರ್ಡ್, ವಿಳಾಸದ ದೃಢೀಕರಣ ದಾಖಲೆ ಸೇರಿದಂತೆ ಇನ್ನಿತರೆ  ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ಅಕ್ಟೋಬರ್ 30 ಕಡೆ ದಿನವಾಗಿರುತ್ತದೆ. 

 ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಇವರನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *