ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.
ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಇಂದು ಸಂಜೆ ಅಂತ್ಯ ಕ್ರಿಯೆ ನಡೆಯಲಿದೆ. ಸರೋಜಾ ಅವರಿಗೆ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ.