ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮOಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮAಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ನೈಋತ್ಯ ರೈಲ್ವೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದೆ.
ನೈಋತ್ಯ ರೈಲ್ವೆ ಎಕ್ಸ್ ಸಂದೇಶ : ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವೇಳಾಪಟ್ಟಿ
ರೈಲು ಸಂಖ್ಯೆ 06597 / 06598 ಎಸ್ಎಂವಿಟಿ ಬೆಂಗಳೂರು – ಕಾರವಾರ, ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಸ್ಪೆಷಲ್ ವಿವರಗಳು ಈ ಕೆಳಗಿನಂತಿವೆ, ರೈಲು ಸಂಖ್ಯೆ 06597 ಅಕ್ಟೋಬರ್ 30 ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 06598 ಅಕ್ಟೋಬರ್ 31 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.