ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕ್ ಸಹಯೋಗದೊಂದಿಗೆ)ಯಡಿ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ.ಗಳ ಸಾಲ ನೀಡಲಾಗುವುದು. ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ. 75ರಷ್ಟು ಸಹಾಯಧನ ಅಥವಾ ಗರಿಷ್ಟ 4 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 1 ಲಕ್ಷ ರೂ.ಗಳಿಗೆ 6
5೦,೦೦೦ ರೂ.ಗಳ ಸಹಾಯಧನ ಹಾಗೂ ಶೇ. 4ರಷ್ಟು ಬಡ್ಡಿದರದಲ್ಲಿ 5೦,೦೦೦ ರೂ.ಗಳ ಸಾಲ ಮಂಜೂರು ಮಾಡಲಾಗುವುದು.
ಪ್ರೇರಣಾ(ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆಯಡಿ ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದ 10 ಸದಸ್ಯರು ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 2.40 ಲಕ್ಷ ರೂ.ಗಳಿಗೆ 1.50 ಲಕ್ಷ ರೂ.ಗಳ ಸಹಾಯಧನ ಹಾಗೂ 1 ಲಕ್ಷ ರೂ.ಗಳನ್ನು ಸಾಲದ ರೂಪದಲ್ಲಿ ನೀಡಲಾಗುವುದು.
ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆಬಾವಿ, 1.20 ರಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿ ಕೊಡಲಾಗುವುದು.
ಅರ್ಜಿದಾರರು ಕನಿಷ್ಟ ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ವ್ಯವಸಾಯ ಉದ್ದೇಶಕ್ಕೆ ಸಂಬ0ಧಪಟ್ಟಂತೆ _ 18 ರಿಂದ 60ವರ್ಷ; ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವರ್ಷದೊಳಗಿನ ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1,5೦,೦೦೦ ರೂ. ಹಾಗೂ ನಗರ ಪ್ರದೇಶದವರಿಗೆ 2,೦೦,೦೦೦ ರೂ.ಗಳ ಮಿತಿಯೊಳಗಿರಬೇಕು. ಅರ್ಜಿದಾರರ ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರಿ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ವಾಹನಗಳಿಗೆ ಆರ್ಥಿಕ ನೆರವು ಬಯಸುವ ಫಲಾಪೇಕ್ಷಿಯು ಚಾಲನಾ ಪರವಾನಗಿಯೊಂದಿಗೆ ಬ್ಯಾಡ್ಜ್ ಹೊಂದಿರಬೇಕು.
ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಭೂ ಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕೂಲಿ ಕಾರ್ಮಿಕರಾಗಿರಬೇಕು.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ಮೂಲಕ ನವೆಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂ.ಸಂ. 08162280165 ಅಥವಾ ವೆಬ್ಸೈಟ್ ವಿಳಾಸ https://kmvstdcl.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.