ಬೆಂಗಳೂರು: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ 2024ರ ಡಿಸೆಂಬರ್ 21 ರಿಂದ 24 ರವರೆಗೆ “ಆರ್ಥಿಕತೆ ಮತ್ತು ಪೌಷ್ಟಿಕತೆಗಾಗಿ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ತೋಟಗಾರಿಕೆ ಮೇಳದಲ್ಲಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಲ್ಲಿ, ಪ್ರತಿಯೊಂದು ಜಿಲ್ಲೆಗೆ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಒಬ್ಬ ಕೃಷಿಕರಿಗೆ, ಶ್ರೇಷ್ಠ ತೋಟಗಾರಿಕೆ ರೈತ / ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಯ ಅರ್ಹ ರೈತ / ರೈತ ಮಹಿಳೆಯರು ಅರ್ಜಿ ನಮೂನೆಯನ್ನು, ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಛೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋ.ವಿ.ವಿ. ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು ಅಥವಾ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜಾಲತಾಣ www.uhsbagalkot.karnataka.gov.in ಮೂಲಕ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ 5ನೇ ನವೆಂಬರ್ 2024ರ ಸಂಜೆ 5 ರೊಳಗಾಗಿ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಛೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು – 560065 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಡಾ. ಇಟಿಗಿ ಪ್ರಭಾಕರ, ವಿಸ್ತರಣಾ ಮುಂದಾಳು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೆಂಗಳೂರು ಮೊ.ಸಂ. 9538771475, ಡಾ. ದೊಡ್ಡಬಸಪ್ಪ ಬಿ. ಸಹಾಯಕ ಪ್ರಾಧ್ಯಾಪಕರು, ಕೃಷಿ ಕೀಟಶಾಸ್ತ್ರ, ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು ಮೊ.ಸಂ. 7795072699, ಶ್ರೀಮತಿ ಸೀಮಾ ಎಂ. ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು ಮೊ.ಸಂ. 7411228096 ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ 18004257910ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.