ಕಟ್ಟಡ ದುರಂತದಲ್ಲಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಟ್ಟಡ ದುರಂತದಲ್ಲಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ : ಸಿಎಂ ಸಿದ್ದರಾಮಯ್ಯ ಘೋಷಣೆ

Siddaramaiah

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ದುರಂತದಲ್ಲಿ 8 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. 8 ಜನರನ್ನು ರಕ್ಷಣೆ ಮಾಡಲಾಗಿದೆ. ಆರು ಜನ ಗಾಯಗೊಂಡಿದ್ದು ಕೆಲವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರದಿಂದ ವೈದಿಕೀಯ ವೆಚ್ಚ ಭರಿಸಲಾಗುತ್ತದೆ. ಕಳಪೆ ಕಾಮಗಾರಿಯಿಂದ ಕಟ್ಟಡ ಬಿದ್ದಿದೆ ಮುಂದೆ ಈ ರೀತಿ ಘಟನೆ ಆಗದಂತೆ ಸೂಕ್ತವಾದಂತಹ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ನೋಟಿಸ್ ಕೊಡುವುದಕ್ಕೆ ಸೂಚನೆ ಕೊಟ್ಟಿದ್ದೇನೆ.ಎಂದು ಬಾಬುಸಾಬ್ ಪಾಳ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಬಿಜೆಪಿಯ ಭೈರತಿ ಬಸವರಾಜ್ ಕೂಡ ಇದ್ದರು. ಇದುವರೆಗೂ ಎನ್ ಡಿ ಆರ್ ಎಫ್ ಎಸ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಸೇರಿ ಕಟ್ಟಡದ ಅವಶೇಷಗಳ ಅಡಿ ಸಿಲುಕಿದ ಎಂಟು ಜನರ ಕಾರ್ಮಿಕರ ಮೃತ ದೇಹವನ್ನು ಹೊರ ತೆಗೆದಿದ್ದಾರೆ.ಅಲ್ಲದೆ ಇನ್ನೂ ಇಬ್ಬರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಪರಿಹಾರ ನೀಡುತ್ತೇವೆ ಗಾಯಾಳುಗಳಿಗೆ ಸರ್ಕಾರದಿಂದ ವೈದಿಕರಿಸಲಾಗುತ್ತದೆ

Leave a Reply

Your email address will not be published. Required fields are marked *