ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ (ಅಕ್ಟೋಬರ್ 24) ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹಾಗಾದರೆ ಎಷ್ಟು ದಿನಗಳ ಅವಧಿಯಲ್ಲಿ ಎಷ್ಟು ಹಣ ಸಂಗ್ರವಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಂಕಿತ ಇಲ್ಲಿ ನೀಡಲಾಗಿದೆ.
ನಿನ್ನೆ ಚಾಮರಾಜನಗೆ ಜಿಲ್ಲೆ, ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಹಾಗಾದರೆ ಮೂಲಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಲೆ ಮಹದೇಶ್ವರ ಬೆಟ್ಟ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಿ ಸಂಜೆ 7 ಗಂಟೆಗೆ ಮುಕ್ತಾಯಗೊಂಡಿತು.
ಮಹಾನವಮಿ, ಆಯುಧ ಪೂಜೆ ವಿಜಯದಶಮಿ, ದಸರಾ ರಜಾ ದಿನಗಳು, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹರಕೆಯ ರೂಪದಲ್ಲಿ 2,00,80,844 ನಗದು 30 ಗ್ರಾಂ ಚಿನ್ನ ಹಾಗೂ 1,865 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಅಷ್ಟೇ ಅಲ್ಲದೆ ಈ ಹುಂಡಿಗೆ 2,74,204 ಒಮಾನ್ನ 10 ನೋಟು, ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 22 ನೋಟುಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ. ಇನ್ನು ಹುಂಡಿ ಎಣಿಕೆ ವೇಳೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಇದ್ದರು.