ಬೆಂಗಳೂರು: ರೈತರು ತಾವು ಬೆಳೆದಂಥ ಬೆಳೆಗೆ ಬೆಂಬಲ ಬೆಲೆ ಸಿಗುವವರೆಗೂ ಕಾಯಬೇಕಾದಂತ ಪರಿಸ್ಥಿತಿ ಒಂದು ಕಡೆಯಾದರೆ, ಈಗ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಲ್ ಗೆ 6,783 ರೂಪಾಯಿ ನಿಗದಿಪಡಿಸಿದ್ದು ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ ,ಬಳ್ಳಾರಿ ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ ,ದಾವಣಗೆರೆ ರಾಯಚೂರು ,ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಸಚಿವರು ತಿಳಿಸಿದ್ದಾರೆ. ಹಾಗೆ ಬೆಂಬಲ ಬೆಲೆ ಯೋಜನೆ ಅಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಈ ಬಗ್ಗೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
Related Posts
ಹಾಸನಾಂಬೆ ದರ್ಶನೋತ್ಸವ : 4 ದಿನದಲ್ಲಿ ಬರೋಬ್ಬರಿ 3 ಕೋಟಿ ರೂ. ಆದಾಯ ಸಂಗ್ರಹ
ಹಾಸನ – ನಗರದ ಅಧಿದೇವತೆ ಹಾಸನಾಂಬೆ ವಾರ್ಷಿಕ ದರ್ಶನೋತ್ಸವ ಆರಂಭವಾದ ನಾಲ್ಕು ದಿನದೊಳಗೆ ದೇವಾಲಯಕ್ಕೆ ಬರೋಬ್ಬರಿ 3 ಕೋಟಿಗೂ ಹೆಚ್ಚು ಆದಾಯ ಬಂದಿದೆ. ಇಲ್ಲಿಯವರಿಗೂ 8 ರಿಂದ…
J&K ಚುನಾವಣೆ || ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ‘ಜುಮ್ಲಾ ಪತ್ರ’ ಎಂದು ಕರೆದ ಕಾಂಗ್ರೆಸ್
ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೊರಡಿಸಿರುವ ಪ್ರಣಾಳಿಕೆಯನ್ನು ಶುಕ್ರವಾರ ಕಾಂಗ್ರೆಸ್ “ಜುಮ್ಲಾ ಪತ್ರ” ಎಂದು ಕರೆದಿದೆ. ಅಲ್ಲದೇ, ಕೇಸರಿ ಪಕ್ಷವು…
ರಾಷ್ಟ್ರೀಯ ಹೆದ್ದಾರಿ ಬಳಿ ಬೆನ್ನಟ್ಟಿ ಯುವಕನ ಬರ್ಬರ ಹತ್ಯೆ : ನಾಲ್ವರ ಬಂಧನ
ಬೆಂಗಳೂರು: ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ನಂದಗುಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಕೋಲಾರ ಮೂಲದ ಭಾರ್ಗವ್ (24) ಅವರು…