ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಕ್ಟೋಬರ್ 15, 2024 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2024 ರವರೆಗೆ ವಿಸ್ತರಿಸಲಾಗಿದೆ.

ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನವೆಂಬರ್ 30, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು https://ssp.postmatric.karnataka.gov.in ವೆಬ್ಸೈಟ್ ಮೂಲಕ ಅಕ್ಟೋಬರ್ 31, 2024 ರೋಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಅಥವಾ bcwdhelpline@gmail.com ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *