ಬೆಂಗಳೂರು : ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಸರದಿ ರಜೆಗಳು ಇರುವುದರಿಂದ ಸಾರ್ವಜನಿಕರು ತಮ್ಮ ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ಕೆಲವು ಖಾಸಗಿ ಪ್ರಯಾಣಿಕ ವಾಹನಗಳ ಮಾಲೀಕರು ಹಾಗೂ ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕಿಂಗ್ ಸಂದರ್ಭದಲ್ಲಿ ಪ್ರಯಾಣ ದರಗಳನ್ನ ಎರಡು ಮೂರು ಪಟ್ಟು ಹೆಚ್ಚಳ ಮಾಡಿ ಸಂಗ್ರಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 25-10-2024 ರಂದು ಆಯುಕ್ತರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಅಧ್ಯಕ್ಷತೆಯಲ್ಲಿ ಹಾಗೂ ಅಪರ ಸಾರಿಗೆ ಆಯುಕ್ತರು ಇವರ ಉಪಸ್ಥಿತಿಯಲ್ಲಿ ಖಾಸಗಿ ಬಸ್ ಮಾಲೀಕರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಮಾನ್ಯ ದೊರಕಿಂತ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ಪಡೆಯದಂತೆ ನಿರ್ದೇಶನ ನೀಡಲಾಗಿರುತ್ತದೆ ಆದಾಗಿಯೂ ದುಪ್ಪಟ್ಟು ಹಣವನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ಅನಾನುಕೂಲತೆ ಉಂಟುಮಾಡುವಂತಹ ವಾಹನ ಮಾಲೀಕರ ಮೇಲೆ ರಹದಾರಿ ಮತ್ತು ನೋಂದಣಿ ಪತ್ರವನ್ನು ಅಮಾನತುಪಡಿಸಲು ಹಾಗೂ ಟಿಕೆಟ್ ವಿತರಕರು ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ ಅದರಲ್ಲಿ ಸೂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ನಿಷೇಧಿಸಲಾಗಿದೆ ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಾರಿಗೆ ಇಲಾಖೆ ಖಾಸಗಿ ಬಸ್ ಗಳು ಹೆಚ್ಚಿನ ಟಿಕೆಟ್ ದರ ಸಂಗ್ರಹಿಸಿದರೆ ಸಾರ್ವಜನಿಕರು ದೂರು ನೀಡುವಂತೆ ಮನವಿ ಮಾಡಿದ ನಿಯಂತ್ರಣ ಕೊಠಡಿ ಸಂಖ್ಯೆ 9449863429, 9449863426 ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು.
Related Posts
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗೆ ಸಚಿವ ಲಾಡ್ ಅನಿರೀಕ್ಷಿತ ಭೇಟಿ
ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಗರದ ಸೈದಾಪುರದ ಸಮಾಜ ಕಲ್ಯಾಣ ಇಲಾಖೆ ಮೆಟ್ರಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಅನಿರೀಕ್ಷಿತ…
ಗೃಹಲಕ್ಷ್ಮಿ ಸೇರಿ ಗ್ಯಾರಂಟಿ ಫಲಾನುಭವಿಗಳೇ ಗಮನಿಸಿ : ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ
ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾಗಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವನ್ನು ಸಂಬಂಧಿಸಿದ ಇಲಾಖಾ…
ಎಸ್ಬಿಐ ಗ್ರಾಹಕರಿಗೆ ಸಿಹಿಸುದ್ದಿ..
ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರತಿಯೊಂದು ವರ್ಗದ ಗ್ರಾಹಕರಿಗೆ ಹೊಸ ಯೋಜನೆಗಳನ್ನ ತರುತ್ತದೆ. ಈ ಸರಣಿಯಲ್ಲಿ, MSME ವಲಯಕ್ಕೆ ಸುಲಭವಾಗಿ ಸಾಕಷ್ಟು ಸಾಲಗಳನ್ನು…