ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಮಳೆಯಿಂದಾಗಿ ಭಾರೀ ಅನಾಹುತವೇ ಉಂಟಾಗಿದೆ. ಈ ಹಾನಿಯ ಕುರಿತಂತೆ 3-4 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ 15 ದಿನಗಳಲ್ಲೇ ಪರಿಹಾರ ವಿತರಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ.
ವಾಡಿಕೆ ಮಳೆ ಆಗಬೇಕಿತ್ತು. ಆದರೆ 16.6 ಸೆಂ.ಮೀ. ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3 – 4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ ವಿತರಿಸುತ್ತೇವೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.