ಮೈಸೂರು: ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿ ಹಚ್ಚುವವರ ಸಂಖ್ಯೆ ಹೆಚ್ಚಿರುತ್ತದೆ ಇನ್ನು ದೀಪಾವಳಿ ಹಬ್ಬದ ಅಂಗವಾಗಿ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿ ಸೇರಿಸುವುದಕ್ಕೆ ಮಾತ್ರ ಅವಕಾಶವಿದ್ದು ಅಲ್ಲದೆ ರಾತ್ರಿ ಎಂಟು ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸೇರಿಸುವುದಕ್ಕೆ ಅವಕಾಶ ಇದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಮೈಸೂರಿನ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನಿಶಬ್ದ ವಲಯ ಎಂದು ಘೋಷಿಸಿರುವ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ ಎಂದಿದ್ದಾರೆ. ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ, ಕಾರಂಜಿ ಕೆರೆ, ಲಿಂಗಂಬುದಿಕೆರೆ, ಸಾರ್ವಜನಿಕ ಉದ್ಯಾನವನಗಳು ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ ಗಳು ಶೈಕ್ಷಣಿಕ ಸಂಸ್ಥೆಗಳು ನ್ಯಾಯಾಲಯ ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆಯ ಪ್ರದೇಶದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
Related Posts
ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: AAP
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ ಮತ್ತು ಜೂನ್ 3 ಮತ್ತು…
ರೇಣುಕಾಸ್ವಾಮಿ ಪ್ರಕರಣ: ನಟ ದರ್ಶನ್ಗೆ ಮಧ್ಯಂತರ ಜಾಮೀನು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ತಪಾಸಣೆಗಾಗಿ ಜಾಮೀನು ಕೋರಿ ದರ್ಶನ್…
ಆಂಧ್ರ, ತೆಲಂಗಾಣದಲ್ಲಿ ಪ್ರವಾಹ : ಸಾವಿನ ಸಂಖ್ಯೆ 27ಕ್ಕೆ ಏರಿಕೆ
ಹೈದರಾಬಾದ್/ಅಮರಾವತಿ: ತೆಲುಗು ನಾಡಿನ ರಾಜ್ಯಗಳಾದ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಭಾನುವಾರ ಸತತ ಎರಡನೇ ದಿನವೂ ಮಳೆ ಅಬ್ಬರ ಜೋರಾಗಿತ್ತು. ಭಾರೀ ಪ್ರವಾಹದಿಂದಾಗಿ ತಗ್ಗು ಪ್ರದೇಶಗಳ ಮನೆಗಳಿಗೆ ನೀರು…