ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಎ ಡಿ ಜಿ ಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಆಗಿದ್ದಾರೆ ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ. ಆರೋಪಿಗಳು ದುರುದ್ದೇಶ ಪೋರಿತವಾಗಿ ಆರೋಪ ಮಾಡಿದ್ದಾರೆ ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿ ಎಮ್ ಎಂ ನ್ಯಾಯಾಲಯದ ಆದೇಶದಂತೆ ಎಫ್ ಐ ಆರ್ ದಾಖಲಾಗಿದೆ
Related Posts
ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ: ಹೆಚ್’ಡಿ. ಕುಮಾರಸ್ವಾಮಿ ವ್ಯಂಗ್ಯ
ಬೆಂಗಳೂರು: ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ವ್ಯಂಗ್ಯವಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ…
3 ವಸ್ತುಗಳಿಂದ ಕಾಲು ನೋವು ನಿವಾರಣೆಗೆ ಮನೆಮದ್ದು ರೆಡಿ; ತಯಾರಿಸುವ ವಿಧಾನವು ಸಿಂಪಲ್
ಇತ್ತೀಚೆಗೆ ಪೇನ್ ಕಿಲ್ಲರ್ ಮಾತ್ರೆಗಳನ್ನು ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಅಡಿಕ್ಷನ್ ಆಗುವಷ್ಟರ ಮಟ್ಟಿಗೆ ನೋವು ನಿವಾರಕಗಳನ್ನು ಬಳಸುತ್ತಿದ್ದೇವೆ. ಪದೇಪದೆ ಬಳಸುತ್ತಿದ್ದಂತೆ ಡೋಸ್ ಅನ್ನು ಹೆಚ್ಚಿಸಬೇಕಾಗುತ್ತದೆ. ಇದು ದೇಹದಲ್ಲಿನ…
ಪೋಷಕರೇ ಹುಷಾರ್ : ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟರೆ ನಿಮಗೆ ಬೀಳಲಿದೆ ದೊಡ್ಡ ಮಟ್ಟದ ದಂಡ
ಹುಬ್ಬಳ್ಳಿ: ಅಪ್ರಾಪ್ತರಿಗೆ ವಾಹನ ಚಲಾಯಿಸಲು ಅವಕಾಶ ಮಾಡಿಕೊಟ್ಟ ನಾಲ್ವರು ಪಾಲಕರಿಗೆ ದಂಡ ವಿಧಿಸಿ ಇಲ್ಲಿನ ಕೋರ್ಟ್ ಆದೇಶ ನೀಡಿದೆ. ಹುಬ್ಬಳ್ಳಿಯ ಜೆಎಂಎಫ್ಸಿ 3ನೇ ನ್ಯಾಯಾಲಯವು ನಾಲ್ವರು ಪೋಷಕರಿಗೆ ಈ…