ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಿರ್ದೇಶಕ ಗುರುಪ್ರಸಾದ್ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಎಲ್ಲರಿಗೂ ಗೊತ್ತೆ ಇದೆ. ಸಾಲಭಾಧೆಯಿಂದ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಏಳೆಂಟು ದಿನಗಳ ಹಿಂದೆ ಅವರು ನೇಣುಬಿಗಿದುಕೊಂಡಿದ್ದು ನವೆಂಬರ್ 3ರಂದು ಕೊಳತೆ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.
ಗುರುಪ್ರಸಾದ್ ಸುತ್ತಾ ನಟ ಜಗ್ಗೇಶ್ ಆಡಿದ ಕೆಲ ಮಾತುಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಲಾಯರ್ ಜಗದೀಶ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಸಾವಿನ ಮನೆಯಲ್ಲಿ ವಿಕೃತಿ ಕಾಣುವ ವ್ಯಕ್ತಿ ಜಗ್ಗೇಶ್ ಎಂದು ಬೇಸರ ವ್ಯಕ್ತಪಡಿಸಿದ್ದರು. ಗುರುಪ್ರಸಾದ್ ಆರೋಗ್ಯ ಸಮಸ್ಯೆಯ ಬಗ್ಗೆ ಪುನೀತ್ ರಾಜ್ಕುಮಾರ್ ಬಗ್ಗೆ ಅವರು ಆಡಿದ್ದ ಮಾತುಗಳ ಬಗ್ಗೆ ಜಗ್ಗೇಶ್ ಮಾತನಾಡಿದ್ದರು. ಆದರೆ ತಮ್ಮ ಮೇಲೆ ಮಾತನಾಡಿದವರಿಗೆ ಇದೀಗ ಜಗ್ಗೇಶ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
“ಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತದೆ. ಅದಕ್ಕೆ ಸೈಂಟಿಫಿಕ್ ಕಾರಣ “ಭಯ”. ಎರಡನೆಯದು ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ಇದರ ತಾತ್ಪಾರ್ಯ “ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು” ಎಂದು ಟ್ವೀಟ್ ಮಾಡಿದ್ದಾರೆ.