ಮಿತಿ ಮೀರಿದ ರಸ್ತೆ ಅಪಘಾತ || ಅತೀ ವೇಗದ ಚಾಲನೆ, ರಸ್ತೆ ನಿಯಮಗಳ ಅರಿವು ಇಲ್ಲ

ಮಿತಿ ಮೀರಿದ ರಸ್ತೆ ಅಪಘಾತ || ಅತೀ ವೇಗದ ಚಾಲನೆ, ರಸ್ತೆ ನಿಯಮಗಳ ಅರಿವು ಇಲ್ಲ

ರಾಯಚೂರು : ಗಡಿ ಜಿಲ್ಲೆ ರಾಯಚೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಮಿರಿ ಮೀರಿದೆ. ಜಿಲ್ಲಾ ಪೊಲೀಸರು ಎಷ್ಟೇ ಹರಸಾಹಸ ಪಟ್ಟರೂ, ಏನೇ ಕಠಿಣ ನಿಯಮಗಳನ್ನು ಜಾರಿಗೆ ತಂದರೂ ವಾಹನ ಸವಾರರು ಮಾತ್ರ ಬೇಜವಾಬ್ದಾರಿತನ ಬಿಡುತ್ತಿಲ್ಲ. ಅತೀ ವೇಗದ ಚಾಲನೆ, ರಸ್ತೆ ನಿಯಮಗಳ ಅರಿವು ಇಲ್ಲದಿರುವುದು, ಬೇಕಾಬಿಟ್ಟಿ ವಾಹನ ಚಾಲನೆ, ಅವೈಜ್ಞಾನಿಕ ರಸ್ತೆಗಳು ಸೇರಿ ವಿವಿಧ ಕಾರಣಗಳಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯಲ್ಲಿ ಕಳೆದ ಮೂರು ವರ್ಷದ ಅವಧಿಯಲ್ಲಿ ರಸ್ತೆ ಅಪಘಾತಗಳಲ್ಲಿ 1184 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2021ರಲ್ಲಿ ಗರಿಷ್ಠ, ಅಂದರೆ 335 ಮಂದಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವರ್ಷ 10 ತಿಂಗಳಲ್ಲೇ 240 ಜೀವ ಬಿಟ್ಟಿದ್ದಾರೆ. ಸಂಚಾರ ನಿಯಮಗಳ ಉಲ್ಲಂಘನೆಯಲ್ಲಿ ರಾಯಚೂರು ಜಿಲ್ಲೆ ಮುಂಚೂಣಿಯಲ್ಲಿರುವುದು ಇಲಾಖೆಯ ಅಂಕಿಅAಶಗಳಿOದಲೇ ಬಹಿರಂಗವಾಗಿದೆ. ನOಬರ್ ಪ್ಲೇಟ್‌ಗಳೇ ಇಲ್ಲದ ವಾಹನಗಳು!

ದೇವದುರ್ಗ, ಸಿಂಧನೂರು ಹಾಗೂ ಲಿಂಗಸುಗೂರು ತಾಲ್ಲೂಕಿನಲ್ಲಿ ಬಹುತೇಕ ವಾಹನಗಳಿಗೆ ನಂಬರ್ ಪ್ಲೇಟ್‌ಗಳೇ ಇಲ್ಲ. ಮರಳು ಸಾಗಿಸುವ ನೂರಾರು ವಾಹನಗಳಿಗೆ ನಂಬರ್ ಪ್ಲೇಟ್ ಇಲ್ಲ. ವಿವಿಧ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯ ಕೂಡ ಇದರಲ್ಲಿ ಎದ್ದು ಕಾಣುತ್ತಿದೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರ ಪೈಕಿ ಬೈಕ್ ಸವಾರರೇ ಹೆಚ್ಚಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಜಿಲ್ಲಾಡಳಿತ ಆದೇಶಿಸಿದೆ.

ಈ ವಿಚಾರವಾಗಿ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಮಾಹಿತಿ ನೀಡಿದ್ದು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *