ಕಾರವಾರ: ಕೈಗಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಕಾರವಾರ ತಾಲೂಕಿನ ವಿರ್ಜೆ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಬಸ್ನಲ್ಲಿದ್ದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೈಗಾ ಅಣು ವಿದ್ಯುತ್ ಸ್ಥಾವರದ ಟೌನ್ಶಿಪ್ ಸಿಬ್ಬಂದಿಯನ್ನು ಕರೆದೊಯ್ಯುವ ಖಾಸಗಿ ಬಸ್ ವಿರ್ಜೆ ಗ್ರಾಮದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ನಿಲ್ಲಿಸಿದ ಚಾಲಕ ಎಲ್ಲರನ್ನೂ ಕೆಳಗಿಳಿಸಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಕೈಗಾ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಾಗಲೇ ಬಸ್ ಬೆಂಕಿಗೆ ಆಹುತಿಯಾಗಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.