ರಾಜ್ಯ ಸರ್ಕಾರದಿಂದ ನಾಳೆಯಿಂದಲೇ `BPL’ ಕಾರ್ಡ್ ಪರಿಷ್ಕರಣೆ ಆರಂಭ!

ತುಮಕೂರು ಜಿಲ್ಲೆಯಲ್ಲಿ 12,804 ಬಿಪಿಎಲ್ ಕಾರ್ಡ್ ರದ್ದು, ಇನ್ನಷ್ಟು ಕಾರ್ಡ್ ರದ್ದು ಸಾಧ್ಯತೆ

ಬೆಂಗಳೂರು : ರಾಜ್ಯಾದ್ಯಂತ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ.

ಐಟಿ ಹೆಸರಿನಲ್ಲಿ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುವುದು.

ಐಟಿ, ಜಿಎಸ್ ಟಿ ಇರುವ 10 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರಕ್ಆರ ಮುಂದಾಗಿದೆ. `BPL ರೇಷನ್ ಕಾರ್ಡ್’ ಪಡೆಯಲು ಇರುವ ಮಾನದಂಡಗಳೇನು? ಇಲ್ಲಿದೆ ಮಾಹಿತಿ

1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ;

2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.

3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

4. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,

5. ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.

ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *