ತುಮಕೂರು:- ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಗೋವಾ ಕಡೆಗೆ ತೆರಳುತ್ತಿದ್ದಂತಹ ಖಾಸಗಿ ಬಸ್ ಪಲ್ಟಿಯಾಗಿದೆ.
ಸನ್ ರೈಸರ್ಸ್ ಎಂಬ ಖಾಸಗಿ ಬಸ್ ಅಪಘಾತಕ್ಕೆ ಈಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಗಾಯಗೊಂಡ ಗಾಯಾಳುಗಳನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.